ದೆಹಲಿ:- ಪಾಕಿಸ್ತಾನವು ಭಾರತದ ಅದ್ಇಕಾರಿಗಳನ್ನು ಸಂಪರ್ಕಿಸಿ ಕದನ ವಿರಾಮದ ವಿಚಾರವಾಗಿ ಎರಡೂ ದೇಶಗಳ ನಡುವೆ ನೇರವಾಗಿ ಮಾತುಕತೆ ನಡೆಸಲಾಯಿತು ಎಂದು ಕೇಂದ್ರ ಸರ್ಕಾರ ಶನಿವಾರವಾದ ಇಂದು ತಿಳಿಸಿದೆ.
ಎರಡಕ್ಕೂ ಹೆಚ್ಚು ದಿನಗಳ ಕಾಲ ನಡೆದ ಮಿಲಿಟರಿ ಕಾರ್ಯಾಚರಣೆ ಮತ್ತು ಎರಡು ನೆರೆಹೊರೆಯವರ ನಡುವಿನ ಉದ್ವಿಗ್ನತೆಯ ನಂತರ ಕದನ ವಿರಾಮವನ್ನು ದೃಢಪಡಿಸಿತು.
ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 3.30ಕ್ಕೆ ಭಾರತದ ಡಿಜಿಎಂಒ ಅವರನ್ನು ಸಂಪರ್ಕಿಸಿ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎರಡೂ ಕಡೆಯವರು ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ಸಂಜೆ 5 ರಿಂದ ಜಾರಿಗೆ ಬರುವಂತೆ ನಿಲ್ಲಿಸುವುದಾಗಿ ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.
ಕದನ ವಿರಾಮ ಒಪ್ಪಂದವನ್ನು ಘೋಷಿಸುವ ಸಂಕ್ಷಿಪ್ತ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಕಾರ್ಯದರ್ಶಿ, ಈ ತಿಳುವಳಿಕೆಯನ್ನು ಕಾರ್ಯಗತಗೊಳಿಸಲು ಎರಡೂ ದೇಶಗಳಿಗೂ ಸೂಚನೆಗಳನ್ನು ನೀಡಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕರು ಮೇ 12 ರಂದು ಮತ್ತೆ ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ.