Uncategorized

ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ರದ್ದು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಜೂನ್ 20ರಂದು ಸಿಎಂ ಸಿದ್ದರಾಮಯ್ಯ ಕಾರವಾರಕ್ಕೆ ತೆರಳುವವರಿದ್ದರು. ಆದರೆ, ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.