ಬೆಂಗಳೂರು:- ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹ್ಮದ್ ಹೊರತುಪಡಿಸಿ ಉಳಿದಂತೆ ಪಕ್ಷದ ಯಾವ ಎಂಎಲ್ಸಿಗಳಿಗೂ ನಿಗಮ – ಮಂಡಳಿ ನೇಮಕ ಸೇರಿ ಯಾವುದರಲ್ಲೂ ಅಧಿಕಾರ ನೀಡಿಲ್ಲ. ಈ ಬಗ್ಗೆ ಕೆಲವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ದೂರು ನೀಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇಂದು ಸಭೆ ಕರೆದಿರುವುದು ಮಹತ್ವ ಪಡೆದುಕೊಂಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಂಗಳವಾರ ರಾತ್ರಿಯೇ ನಗರಕ್ಕೆ ಆಗಮಿಸಿದ್ದಾರೆ.
ನಗರದ ಪುರಭವನದಲ್ಲಿ ನಿಗದಿಯಾಗಿರುವ ‘ಜೈಹಿಂದ್’ ಕಾರ್ಯಕ್ರಮದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಎಲ್ಲ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಲಿದೆ, ಎಂಎಲ್ಸಿಗಳಿಗೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಕೆಲವೊಂದು ಜವಾಬ್ದಾರಿ ನೀಡುವ ಕುರಿತೂ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ.
ಪಾಕಿಸ್ತಾನದ ವಿರುದ್ಧ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆಯಲ್ಲಿ ಯೋಧರನ್ನು ಅಭಿನಂದಿಸಲು ಪುರಭವನದಲ್ಲಿ ‘ಜೈ ಹಿಂದ್’ ಕಾರ್ಯಕ್ರಮ ಆಯೋಜಿಸಲಾಗಿದೆ.