ಬೆಂಗಳೂರು

ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪಡೆ ರಚನೆ ಮಾಡುವ ಪ್ರಸ್ತಾವನೆಯ ಬಗ್ಗೆ ಚರ್ಚೆ.- ಪರಮೇಶ್ವರ್

ಬೆಂಗಳೂರು:- ಕರಾವಳಿಯ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಲ್ಲಿ ಕೋಮು ಚಟುವಟಿಕೆಗಳನ್ನು ನಿಗ್ರಹಿಸಲು ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪಡೆ ರಚನೆ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸರ್ಕಾರಕ್ಕೆ ಕಳುಹಿಸಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡಿ ಎರಡು-ಮೂರು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಜಿ.ಪರಮೇಶ್ವರ್ ನಗರದ ತಮ್ಮ ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ್ದಾರೆ.

ಮಂಗಳೂರಿನ ಸುಹಾಸ್ ಶೆಟ್ಟಿ ಪ್ರಕರಣವನ್ನು ಎನ್‌ಐಎಗೆ ವಹಿಸುವ ಅಗತ್ಯವಿಲ್ಲ. ಆದರೆ, ಬಿಜೆಪಿಯವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ರಾಜ್ಯಪಾಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನಮಗೆ ಗೊತ್ತಿಲ್ಲ ಎಂದ ಅವರು ಈಗಾಗಲೇ ಕರಾವಳಿ ಭಾಗದಲ್ಲಿ ವಿಶೇಷ ಕಾರ್ಯಪಡೆ ರಚಿಸುವ ಕುರಿತು ಪ್ರಸ್ತಾವನೆ ಬಂದಿದ್ದು ಎರಡು ಮೂರು ದಿನಗಳಲ್ಲಿ ಸಿಎಂ ಜೊತೆ ಈ ಕುರಿತು ಚರ್ಚಿಸಲಾಗುತ್ತದೆ ಎಂದಿದ್ದಾರೆ.