ಹಾವೇರಿ

ಗಾಲಿ ಜನಾರ್ಧನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ

ಹಾವೇರಿ:- ಗಂಗಾವತಿಯ ಶಾಸಕ ಗಾಲಿ ಜನಾರ್ಧನ ರೆಡ್ಡಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಶಾಸಕ ಸ್ಥಾನದಿಂದ ರೆಡ್ಡಿಯವರನ್ನು ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ.

ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ.

ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.