ಬೆಂಗಳೂರು:- ಬಿಜೆಪಿ ಈ ಹಿಂದೆ 23 ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಆದರೆ, ಇದೀಗ ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ.
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ:
ಮೈಸೂರು ಗ್ರಾಮಾಂತರ – ಕೆಎನ್ ಸುಬ್ಬಣ್ಣ.
ಹಾಸನ – ಸಿದ್ದೇಶ್ ನಾಗೇಂದ್ರ.
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್ ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ್ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)
ಜನವರಿಯಲ್ಲಿ 23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿತ್ತು. ಆದರೆ, ಕೆಲ ಗೊಂದಲ, ಆಂತರಿಕ ಕಚ್ಚಾಟದಿಂದ 10 ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರಲಿಲ್ಲ. ಇದೀಗ ಬಾಕಿ ಇದ್ದ ಜಿಲ್ಲಾಧ್ಯಕ್ಷರನ್ನು ಸಹ ನೇಮಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರನ್ನಾಗಿ ಸಂದೀಪ್ ರೆಡ್ಡಿ ಅವರನ್ನು ಮೊದಲ ಪಟ್ಟಿಯಲ್ಲೇ ನೇಮಿಕ ಮಾಡಲಾಗಿತ್ತು. ಆದರೆ, ಇದಕ್ಕೆ ಸಂಸದ ಡಾ ಕೆ ಸುಧಾಕರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಯಾರನ್ನು ಕೇಳಿ ಮಾಡಿದ್ದೀರಿ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧವೇ ಬಹಿರಂಗವಾಗಿ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಆಯ್ಕೆ ತಡೆಹಿಡಿಯಲಾಗಿತ್ತು. ಈಗ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರನ್ನಾಗಿ ಎಸ್.ವಿ.ರಾಮಚಂದ್ರ ಗೌಡ ಅವರನ್ನು ನೇಮಕ ಮಾಡಲಾಗಿದೆ.