ಮಂಗಳೂರು:- ಜಿಲ್ಲೆಯಲ್ಲಿ ಉದ್ವಿಗ್ನ ವಾತಾವರಣ, ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸ್ ಇಲಾಖೆ ತೋರುತ್ತಿರುವ ಇಬ್ಬಗೆ ನೀತಿ, ಮುಸ್ಲಿಂ ಮುಖಂಡರ ರಾಜೀನಾಮೆ ನಾಟಕಕ್ಕೆ ಬೆದರಿ, ಅಲ್ಪಸಂಖ್ಯಾತರ ಒಲೈಕೆಗಾಗಿ ಹಿಂದೂ ಮುಖಂಡರ ಮೇಲೆ ಎಫ್.ಐ.ಆರ್ ದಾಖಲು, ರಾತ್ರಿ ಹೊತ್ತಲ್ಲಿ ಪೊಲೀಸರು ಮನೆಗೆ ನುಗ್ಗಿ ತನಿಖೆ ನೆಪದಲ್ಲಿ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವುದು, ಆರ್ಎಸ್ಎಸ್ ಪ್ರಮುಖರ ಮನೆಗೆ ಪ್ರವೇಶಿಸಿ ಫೋಟೊ ತೆಗೆಸುವ ಮೂಲಕ ಮಾನಸಿಕ ಹಿಂಸೆ ನೀಡುವ ಘಟನೆಗಳು ನಡೆಯುತ್ತಿವೆ. ಇವುಗಳ ಪರಿಶೀಲನೆ ನಡೆಸಲು ನಿಯೋಗಯೊಂದು ದಕಕ್ಕೆ ನಾಳೆ ಭೇಟಿ ನೀಡಲಿದೆ ಎಂದು ಬಿಜೆಪಿ ಪಕ್ಷದ ಕಚೇರಿಯ ಮೂಲದಿಂದ ತಿಳಿದು ಬಂದಿದೆ.
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ವಿ.ಸುನಿಲ್ ಕುಮಾರ್, ವಿಧಾನ ಪರಿಷತ್ನ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ದ.ಕ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹಾಗೂ ಹಲವು ಮುಖಂಡರು ಈ ನಿಯೋಗದಲ್ಲಿ ಇರಲಿದ್ದಾರೆ.