ದಕ್ಷಿಣ ಕನ್ನಡ

ಧರ್ಮದ ವಿರುದ್ಧ ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿದ ಶಾಸಕ ಪೂಂಜಾ

ಮಂಗಳೂರು:- ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಡಿದ ಒಂದು ಮಾತು ಅವರ ಶಾಸಕ ಸ್ಥಾನಕ್ಕೆ ಕುತ್ತು ತರುವ ಸಂದರ್ಭ ಒದಗಿ ಬಂದಿದೆ. ವಿಧಾನ ಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಫರೀದ್ ವಿರುದ್ಧ ಧರ್ಮದ ಕುರಿತಾದ ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿದ್ದಾರೆ. ಖಾದರ್ ರವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಶಾಸಕರಾದ ಹರೀಶ್ ಪೂಂಜಾ ಅವರು ಸ್ಪೀಕರ್‌ ಮುಸ್ಲಿಂ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದರಿಂದ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡಿದ್ದು, ಹಕ್ಕು ಬಾಧ್ಯತಾ ಸಮಿತಿ ಅಧ್ಯಕ್ಷ ಮಹಾಂತೇಶ ಕೌಜಲಗಿ ಅವರು ಈ ದೂರನ್ನು ಪರಿಶೀಲನೆ ನಡೆಸಲಿದ್ದಾರೆ. ಇದೀಗ ಶಾಸಕ ಹರೀಶ್ ಪೂಂಜಾ ಪ್ರಕರಣದಲ್ಲಿ ಸಭಾಧ್ಯಕ್ಷರು ಏನು ಕ್ರಮ ಕೈಗೊಳ್ಳುತ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.