ಬೆಂಗಳೂರು:- ಉತ್ತರ ಭಾರತದ ಕಾಶ್ಮೀರ ಪ್ರದೇಶದ ಪಹಲ್ಗಾಮ್ ಗ್ರಾಮದಲ್ಲಿರುವ ಬೈಸರನ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದೇಶವನ್ನೇ ಬೆಚ್ಚಿಬೀಳಿಸಿದೆ. ಇದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ರಾಜ್ಯ ಕರ್ನಾಟಕ ಮುಸ್ಲಿಮ್ ಮೂಮೆಂಟ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.
ಪ್ರವಾಸಿಗರು, ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತರು ಮತ್ತು ಕಣಿವೆಯ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ದಾಳಿ ನಡೆದಿದೆ. ಈ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ದೇವರು ನೀಡಲಿ ಎಂದು ಅವರು, ಇಂತಹ ಕೃತ್ಯ ನಡೆಸುವ ಕ್ರೀಮಿಗಳನ್ನು ಮಟ್ಟ ಹಾಕಬೇಕಾಗಿದೆ, ಕನ್ನಡಿಗರು ಸೇರಿದಂತೆ ಮೃತಪಟ್ಟ ಎಲ್ಲರಿಗೂ ಮತ್ತೊಮ್ಮೆ ಸಾಂತ್ವನ ತಿಳಿಸುತ್ತೇನೆ ಎಂದಿದ್ದಾರೆ.
ಪ್ರಾರಂಭದಿಂದಲೂ, ಲಷ್ಕರ್-ಎ-ತೈಬಾ (ಎಲ್‌ಇಟಿ) ಯ ಪ್ರತಿನಿಧಿ ಎಂದು ಪರಿಗಣಿಸಲಾದ ಟಿಆರ್‌ಎಫ್, ಪ್ರವಾಸಿಗರು, ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತರು ಮತ್ತು ಕಣಿವೆಯ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದೆ
