ಬೆಂಗಳೂರು

ಬೆಂಗಳೂರಲ್ಲಿ 9 ಮಂದಿಗೆ ಕೊರೋನಾ ಪಾಸಿಟಿವ್.!!

ಬೆಂಗಳೂರು:- ಕಳೆದ 24 ಗಂಟೆಯಲ್ಲಿ ಬೆಂಗಳೂರಲ್ಲಿ 9 ಮಂದಿಗೆ ಕೊರೋನಾ ಪಾಸಿಟಿವ್ ಇದೆ ಎಂದು ದೃಢಪಟ್ಟಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ RTPCR ಮೂಲಕ 96, RAT ಮೂಲಕ 8 ಮಂದಿ ಸೇರಿದಂತೆ 104 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.

ರಾಜ್ಯದಲ್ಲಿ ಇದೀಗ 47 ಕೊರೋನಾ ಪಾಸಿಟಿವ್ ಕೇಸ್ ಇವೆ. 46 ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಒಬ್ಬರು ಮಾತ್ರವೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.