ಮಂಗಳೂರು:- ಹವಾಮಾನ ಇಲಾಖೆ ಮುನ್ಸೂಚನೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.
ನಗರದ ಪಂಪ್ವೆಲ್, ಪಡೀಲ್, ಗರೋಡಿ, ಕೊಟ್ಟಾರಚೌಕಿ, ಕೊಡಿಯಾಲ್‌ಬೈಲ್ ಸೇರಿದಂತೆ ಹಲವೆಡೆ ಅನೇಕ ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ.
ಕೆಲಸ ಬಿಟ್ಟು ಮನೆಗೆ ಹೋಗಲು ಜನರು ಪರದಾಡಿದ್ದಾರೆ. ನಗರದಲ್ಲಿ ಕೆಲ ಗಂಟೆಗಳ ಕಾಲ ಜನದಟ್ಟಣೆ ಕಂಡುಬಂದು, ವಾಹನ ಚಲಾಯಿಸಲು ಸವಾರರು ಪರದಾಡಿದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುರಿದ ಭಾರೀ ಮಳೆಗೆ ರಸ್ತೆ ಪ್ರವಾಹ ವಿಡಿಯೋ ವೈರಲ್ ಆಗುತ್ತಿದೆ. ನಿರಂತರವಾಗಿ ಸುರಿದ ಮಳೆಗೆ ಜೀವನ ಅಸ್ತವ್ಯಸ್ತಗೊಂಡಿದೆ.
ಕಳೆದ ಐದಾರು ದಿನಗಳಿಂದ ಕರ್ನಾಟಕದ ನಾನಾ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುತ್ತಿದೆ. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದ ಭಾಗದಲ್ಲಿ ರಣಭೀಕರ ಮಳೆಗೆ ಪ್ರವಾಹ ಸ್ಥಿತಿ ಉಂಟಾಗಿದೆ. ಮುನ್ಸೂಚನೆ ನೋಡಿದರೆ ಈ ಪ್ರವಾಹ ಸ್ಥಿತಿ ಇನ್ನು ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಣಭೀಕರ ಮಳೆ ಮೂರು ದಿನ ಮುಂದುವರಿಯಲಿದೆ. ನಂತರ ಎರಡು ದಿನ ಸಾಧಾರಣವಾಗಿ ಸುರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಮೂರು ದಿನ ಹಾಗೂ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರಣಭೀಕರ ಮಳೆ ಪ್ರಯುಕ್ತ ಐಎಂಡಿ ಎರಡು ದಿನ ‘ರೆಡ್ ಅಲರ್ಟ್’ ನೀಡಲಾಗಿದೆ. ಉಳಿದಂತೆ ಇಂದಿನಿಂದ ಮುಂದಿನ 48 ಗಂಟೆಗಳಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಜಿಲ್ಲೆಗಳಿಗೆ ಎರಡು ದಿನ, ಮೈಸೂರಿಗೆ ಒಂದು ದಿನ ಭಾರೀ ಮಳೆ ಹಿನ್ನೆಲೆ ‘ಆರೆಂಜ್ ಅಲರ್ಟ್’ ಘೋಷಣೆ ಆಗಿದೆ ಎಂದು ಐಎಂಡಿ ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ
ಮಂಗಳೂರು: ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ
- ಜೂನ್ 15, 2025
- Less than a minute
- 4 ವಾರಗಳು ago
