ದಕ್ಷಿಣ ಕನ್ನಡ

ಮತೀಯ ಸಂಘಟನೆಗಳ ಜೊತೆ ಸಂಪರ್ಕ ನಂಟಿರುವುದು ತಿಳಿದಿದೆ.- ದ.ಕ ಎಸ್ಪಿ

ಮಂಗಳೂರು:- ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ, ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಅವರು ಮಾತನಾಡಿ, ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆಯಾಗಿದೆ, ಕಳೆದ 10 ವರ್ಷಗಳ ಹಿಂದಿನ ಕೊಲೆ ಪ್ರಕರಣದ ಆರೋಪಿಗಳ ಮಾಹಿತಿ ತೆಗೆದಾಗ ಅವರೆಲ್ಲರಿಗೂ ಮತೀಯ ಸಂಘಟನೆಗಳ ಜೊತೆ ಸಂಪರ್ಕ ನಂಟಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮತೀಯ ಸಂಘಟನೆಗಳ ಮುಖಂಡರು ನಿತ್ಯ ಇರುವ ಸ್ಥಳ ಹಾಗೂ ಅವರ ಕಾರ್ಯಚಟುಟಿಕೆಗಳ ಬಗ್ಗೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಅವರ ಹೆಸರನ್ನು ಪಟ್ಟಿ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಮತೀಯ ಸಂಘಟನೆಗಳ ಸದಸ್ಯರ ಪರಿಶೀಲನೆಗೆ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.