ಬೆಂಗಳೂರು

ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ವೀಣಾಕಾಶಪ್ಪನವರ್ ಆಯ್ಕೆ

ಬೆಂಗಳೂರು:- ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪನವರು ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ವಿಭಾಗದ ಅಧ್ಯಕ್ಷರನ್ನಾಗಿ ಶ್ರೀಮತಿ ವೀಣಾಕಾಶಪ್ಪನವರ್ ಇಳಕಲ್ ಹುನಗುಂದ ಇವರನ್ನು ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಶ್ರೀಮತಿ ವೀಣಾಕಾಶಪ್ಪನವರ್ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಿಂದ ಆದೇಶದ ಪ್ರತಿಯನ್ನು ಸ್ವೀಕರಿಸಿ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ಸೇರಿದಂತೆ ಚಲನಚಿತ್ರ ನಟ, ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ಇತರರು ಉಪಸ್ಥಿತರಿದ್ದರು.