ಚಿಕ್ಕಮಗಳೂರು

ಶೃಂಗೇರಿ ಕ್ಷೇತ್ರಕ್ಕೆ 250 ಕೋಟಿಗಿಂತ ಹೆಚ್ಚಿನ ಅನುದಾನ ಸರ್ಕಾರ ನೀಡಿದೆ.- ಡಾ.ಅಂಶುಮಂತ್ ಗೌಡ

ಚಿಕ್ಕಮಗಳೂರು:- ಜಿಲ್ಲೆಯ ನರಸಿಂಹರಾಜಪುರದ ಪ್ರವಾಸಿ ಮಂದಿರದಲ್ಲಿ ಶನಿವಾರ ವಿವಿಧ ಇಲಾಖೆಗಳಿಗೆ ಸರ್ಕಾರದ ಭದ್ರ (ಕಾಡಾ)ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರು ಹಾಗೂ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಡಾ.ಕೆ.ಪಿ ಅಂಶುಮಂತ್ ಗೌಡರವರು ಸರ್ಕಾರದಿಂದ ನೇಮಿಸಲ್ಪಟ್ಟ ಸರ್ಕಾರದ ನಾಮನಿರ್ದೇಶನ ಸದಸ್ಯರುಗಳಿಗೆ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಜನಪರವಾಗಿ ತಮ್ಮ ಕೆಲಸ ಮಾಡಿ, ಪಕ್ಷಕ್ಕೂ ಸರ್ಕಾರಕ್ಕೂ ಉತ್ತಮ ಹೆಸರು ತರುವಂತಾಗಬೇಕು ಎಂದು ಹೇಳಿದ್ದಾರೆ.
ಅವರು ಮಾಧ್ಯಮದೊಂದಿಗೆ ಮಾತನಾಡಿ, ಈ ಕ್ಷೇತ್ರದಲ್ಲಿ ಪಕ್ಷ ಗೆದ್ದಿದೆಯೆಂದರೆ ಅದು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಮುಖ್ಯ ಕಾರಣವಾಗಿದೆ. ಅಲ್ಲದೆ, ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಾದ ರಾಜೇಗೌಡರು ಆಯ್ಕೆಯಾಗಿದ್ದಾರೆ.

ಈ ಎರಡು ವರ್ಷದಲ್ಲಿ ಶೃಂಗೇರಿ ಕ್ಷೇತ್ರಕ್ಕೆ 250 ಕೋಟಿಗಿಂತ ಹೆಚ್ಚಿನ ಅನುದಾನ ಸರ್ಕಾರ ನೀಡಿದೆ, ಅಲ್ಲದೆ ನೀವು ನಿಮ್ಮ ನಿಮ್ಮ ಇಲಾಖೆಗಳ ಮೇಲೆ ನಿಗಾ ವಹಿಸಿ ಕಾರ್ಯ ಪ್ರವೃತ್ತರಾಗಬೇಕಾಗಿದೆ. ಒಂದು ವೇಳೆ ಅಧಿಕಾರಿಗಳು ಜನಪರ ಸಮಸ್ಯೆಗಳಿಗೆ ಸ್ಪಂದಿಸದೆ ಹೋದರೆ ಶಾಸಕರ ಜೊತೆಯಲ್ಲಿ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಬೇಕು, ಪಕ್ಷ ನಿಮ್ಮ ಪ್ರಾಮಾಣಿಕ ನಡವಳಿಕೆಗಳನ್ನು ಗುರುತಿಸಿ ನಾಯಕತ್ವವನ್ನ ನೀಡಿದೆ, ಅದನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷಕ್ಕೂ ಹಾಗೂ ಸರ್ಕಾರಕ್ಕೂ ಹಾಗೂ ಕ್ಷೇತ್ರದ ಶಾಸಕರಿಗೂ ಉತ್ತಮ ಕೀರ್ತಿ ತರುವ ರೀತಿಯಲ್ಲಿ ಜವಾಬ್ದಾರಿಯುತವಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಈ ಸಭೆಯಲ್ಲಿ ತಾಲೂಕು ಕೆ ಡಿ ಪಿ ಸದಸ್ಯರುಗಳು ಸೇರಿದಂತೆ ತಾಲೂಕು ಗ್ಯಾರಂಟಿ ಪ್ರಾಧಿಕಾರದ ಸದಸ್ಯರುಗಳು, ಆರೋಗ್ಯ ಸುರಕ್ಷಾ ಸದಸ್ಯರುಗಳು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಆಶ್ರಯ ಸಮಿತಿಯ ಸದಸ್ಯರುಗಳು, ಪಟ್ಟಣ ಪಂಚಾಯತಿಯ ನಾಮನಿರ್ದೇಶಕರು, ಜಿಲ್ಲಾ ದೌರ್ಜನ್ಯ ಸಮಿತಿಯ ಸದಸ್ಯರು, ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ತಾಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಗೇರ್ ಬೈಲು ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಹಾಗೂ ತಾಲೂಕು ಘಟಕದ ಉಪಾಧ್ಯಕ್ಷ ಬೆನ್ನಿ, ಅತಿಥಿಗಳಾಗಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯದರ್ಶಿ ಕೆ.ಎಂ ಸುಂದರೇಶ್, ಗ್ಯಾರಂಟಿ ಸಮಿತಿಯ ಅಧ್ಯಕ್ಷೆಯಾದ ಚಂದ್ರಮ್ಮ, ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಇ.ಸಿ ಜೋಯ್, ಕಾಲೇಜು ಅಭಿವೃದ್ಧಿ ಮಂಡಳಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಹೋಬಳಿ ಘಟಕದ ಅಧ್ಯಕ್ಷ ಸಾಜು, ತಾಲೂಕು ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹಾಗೂ ಎಲ್ಲಾ ಸಮಿತಿಗಳ ನಾಮಿನಿ ಸದಸ್ಯರುಗಳು ಭಾಗವಹಿಸಿದ್ದರು.