ಬೆಂಗಳೂರು

ಸರ್ಕಾರದ 2 ವರ್ಷದ ಸಾಧನೆ ಕೇವಲ ಬೆಲೆ ಏರಿಕೆ, ಭ್ರಷ್ಟಾಚಾರ- ಹಗರಣಗಳು ಮಾತ್ರ.- ವಿಜಯೇಂದ್ರ

ಬೆಂಗಳೂರು:- ಎರಡು ವರ್ಷಗಳ ಸಾಧನೆಯ ಇದೇ ಎಂದು ಪಟ್ಟಿ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ನೀಡಿದ್ದಾರೆ.
ಜನರ ಲೂಟಿ ಹೊಡೆದಿದೆ, ಭ್ರಷ್ಟಾಚಾರ ತಾಂಡವಾಡುತ್ತಿದೆ. ಬೆಂಗಳೂರು ಸಮಸ್ಯೆ ಮುಂದುವರಿದಿದೆ ಎಂದು ಬಿಜೆಪಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ ಅವರು ಹರಿಹಾಯ್ದಿದ್ದಾರೆ.

ಅಧಿಕಾರಕ್ಕಾಗಿ ಬೇಕಾಬಿಟ್ಟಿಯಾಗಿ ಅಪೂರ್ಣ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದು ಜನರನ್ನು ಲೂಟಿ ಹೊಡೆದಿದ್ದೇ ಕಾಂಗ್ರೆಸ್ ಸರ್ಕಾರದ ಎರಡು ವರ್ಷ ಸಾಧನೆಯಾಗಿದೆ. ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನತೆಯ ವಿಶ್ವಾಸ ಗಳಿಸುವುದು ಬಿಡಿ, ತಮ್ಮ ಆಪ್ತ ಸಲಹೆಗಾರರ ವಿಶ್ವಾಸವನ್ನು ಪಡೆಯಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ದೂರಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ಷರತ್ತುಗಳನ್ನು ಹಾಕುತ್ತಾ, ಕುಂಟುತ್ತಾ ಸಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿಲ್ಲ ಎಂದು ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಸಹ ಖಾಲಿಯಾಗಿ ಗ್ಯಾರಂಟಿ ಯೋಜನೆಗಳ ಹಣ ಸಹ ಸಮಯಕ್ಕೆ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಮೀಸಲಾದ ಹಣವನ್ನು ಸಹ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಸರ್ಕಾರದ 2 ವರ್ಷದ ಸಾಧನೆ ಕೇವಲ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಹಗರಣಗಳು ಮಾತ್ರ. ರಾಜ್ಯದ ಮುಖ್ಯಮಂತ್ರಿಗಳ ರಾಜೀನಾಮೆಗೆ ಈಗ ಮತ ಕೊಟ್ಟ ಮತದಾರರೇ ಕಾಯುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.