Uncategorized

ಸ್ಫೋಟಕವಾದ ಹೇಳಿಕೆಯೊಂದನ್ನು ನೀಡಿದ ಸಚಿವ ದರ್ಶನಾಪುರ

ಯಾದಗಿರಿ:- ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ನಡೆಸಿದ್ದು, ರಾಜ್ಯದ ಕೆಲವು ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು, ಹಲವು ಖಾತೆ ಬದಲಾವಣೆಯಾಗುವ ನಿರೀಕ್ಷೆಯಿದೆ. ಇದೇ ವಿಚಾರವಾಗಿ 10 ರಿಂದ 15 ಸಚಿವರು ಬದಲಾವಣೆ ಆದರೂ ಆಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಸ್ಫೋಟಕವಾದ ಹೇಳಿಕೆಯೊಂದನ್ನು ನೀಡಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಯಾಕೆ ಕರೆದಿದ್ದಾರೆ ಅನ್ನೋದು ನಮಗೆ ಗೊತ್ತಿಲ್ಲ. ಆದರೆ, 10ರಿಂದ 15 ಜನರ ಬದಲಾವಣೆಯಾದರೂ ಆಗಬಹುದು. ಜನರ ತೀರ್ಮಾನದಂತೆ ಸಚಿವ ಸಂಪುಟ ವಿಸ್ತರಣೆ ಆಗಲ್ಲ ಎಲ್ಲವನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸ್ಟೋಟಕ ಹೇಳಿಕೆ ನೀಡುವ ಮೂಲಕ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆಯಾಗುವ ಬಗ್ಗೆ ಸುಳಿವು ನೀಡಿದ್ದಾರೆ.

ಸಚಿವ ಸ್ಥಾನ ನೀಡುವುದಾದರೆ 34ಕ್ಕಿಂತ ಹೆಚ್ಚಿನ ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗಲ್ಲ, ಸಚಿವ ಸ್ಥಾನ ಯಾರಿಗೆ ನೀಡಬೇಕು ಅನ್ನೋದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸುತ್ತಾರೆ. ಸಚಿವ ಸಂಪುಟ ಪುನರ್ ರಚನೆಯಾದರೆ ಸಚಿವರ ಬದಲಾವಣೆ ಆಗುತ್ತದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ.