ಹೊಸಪೇಟೆ:- ಡಿ.ದೇವರಾಜ್ ಅರಸ್ ಟ್ರಕ್ ಟರ್ಮಿನಲ್ಸ್ ಲಿ. ಸಂಸ್ಥೆ ವತಿಯಿಂದ ನಾಳೆ ಹೊಸಪೇಟೆ ತಾಲೂಕಿನ ಅಮರಾವತಿ ಗ್ರಾಮದಲ್ಲಿ ಹೊಸಪೇಟೆ ಟ್ರಕ್ ಟರ್ಮಿನಲ್ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಉದ್ಘಾಟಿಸಲಿದ್ದು, ವಕ್ಫ್, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಉಪಸ್ಥಿತಿಯಲ್ಲಿ ಹೊಸಪೇಟೆ ಶಾಸಕರಾದ ಹೆಚ್.ಆರ್.ಗವಿಯಪ್ಪರವರ ಅಧ್ಯಕ್ಷತೆಯಲ್ಲಿ ಸಮಾರಂಭ ಜರುಗಲಿದೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಂ, ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಕೆ.ನೇಮಿರಾಜನಾಯ್ಕ, ಡಾ.ಎನ್.ಟಿ.ಶ್ರೀನಿವಾಸ್, ಎಲ್.ಕೃಷ್ಣನಾಯ್ಕ, ಎಂ.ಪಿ.ಲತಾ ಮಲ್ಲಿಕಾರ್ಜುನ, ಬಿ.ದೇವೆಂದ್ರಪ್ಪ, ಡಾ.ಚಂದ್ರಶೇಖರ್ ಪಾಟೀಲ್, ಶಶೀಲ್ ನಮೋಶಿ, ವೈ.ಎಂ.ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ನೊಂಗ್ಜಾಯ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್.ಶ್ರೀಹರಿಬಾಬು ಉಪಸ್ಥಿತರಿರಲಿದ್ದಾರೆ.