ಚಿಕ್ಕಬಳ್ಳಾಪುರ

ಹೊಸ ಜಿಲ್ಲೆ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ ಸಿಎಂ

ಚಿಕ್ಕಬಳ್ಳಾಪುರ:- ಉತ್ತರ ಕರ್ನಾಟಕದಲ್ಲಿ ಜಿಲ್ಲೆಗಳ ವಿಭಜನಯೆ ಕೂಗು ಇದೀಗ ಹೆಚ್ಚಾಗಿದೆ, ರಾಜ್ಯದ ಅತಿದೊಡ್ಡ ಜಿಲ್ಲೆ ಬೆಳಗಾವಿ ಜಿಲ್ಲೆಯ ವಿಭಜನೆಗೆ ಕುರಿತು ಸ್ಥಳೀಯ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಈ ಹಿಂದೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು, ಪ್ರಸ್ತುತ 31 ಜಿಲ್ಲೆಗಳ ಪೈಕಿ ಉತ್ತರ ಕರ್ನಾಟಕದ ಜಿಲ್ಲೆಗಳ ವಿಭಜನೆಯ ಕೂಗು ಹೆಚ್ಚಾಗಿದ್ದು, ಅತಿ ದೊಡ್ಡ ಜಿಲ್ಲೆ ಬೆಳಗಾವಿಯನ್ನು ವಿಭಜಿಸಿ ಬೈಲಹೊಂಗಲ ಅಥವಾ ಗೋಕಾಕ್‌, ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ರಚನೆಗೆ ಬೇಡಿಕೆಯಿದೆ.

ಇನ್ನೂ ತುಮಕೂರಿನ ಮಧುಗಿರಿ, ತಿಪಟೂರು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಜಿಲ್ಲೆಗಳಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ, ಮೈಸೂರಿನ ಹುಣಸೂರು ಜಿಲ್ಲೆಗಳಾಗಬೇಕು ಎಂಬುದು ಅಲ್ಲಿನ ಜನರ ಆಗ್ರಹಿಸಿದ್ದಾರೆ. ಇದೀಗ ಇಂದು ಗೌರಿಬಿದನೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

RCB ವಿಜಯೋತ್ಸವದ ವಿಚಾರವಾಗಿ ಮಾತನಾಡಿದ ಸಿಎಂ, ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ RCB ವತಿಯಿಂದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ KSCA ವತಿಯಿಂದ ಶಂಕರ್, ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ, ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು. ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದು ಹೋಯಿತು. ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.