ವಿಜಯಪುರ:- ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುತಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದರಿರುವ ಘಟನೆಯೊಂದು ನಡೆದಿದೆ.
ಹೌದು… ವಿಜಯಪುರ ಜಿಲ್ಲೆಯ ಇಂಡಿ ನಗರದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಬೆಳ್ಳಂಬೆಳಿಗ್ಗೆ ಈ ಹತ್ಯೆ ನಡೆದಿದೆ ಎನ್ನಲಾಗಿದೆ.
ಇಂಡಿಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸಾಯಬಣ್ಣ ಕನ್ನೊಳ್ಳಿ(30) ಹತ್ಯೆಯಾದವರು. ಇನ್ನು ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬುವನು ಹತ್ಯೆಗೈದು ಪರಾರಿಯಾಗಿದ್ದಾನೆ, ಗಂಭೀರವಾಗಿ ಗಾಯಗೊಂಡಿರುವ ರೇಣುಕಾಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಿಸಲಾಗಿದೆ.
ವರದಿ: ಮದೂರ್, ವಿಜಯಪುರ