ಶಿವಮೊಗ್ಗ:- ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಾಳೆಯಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ರಾಷ್ಟ್ರೀಯ ಹೆದ್ದಾರಿ 169A ಪ್ರಮುಖವಾಗಿ ತೀರ್ಥಹಳ್ಳಿ-ಮಲ್ಪೆ ರಸ್ತೆ ಮೂಲಕ ಸಾಗುತ್ತದೆ. ಆದರೆ, ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಈ ಮಾರ್ಗದಲ್ಲಿ ಸಪ್ಟೆಂಬರ್ 30ರ ವರೆಗೆ ಅಂದರೆ ಬರೋಬ್ಬರಿ 3 ತಿಂಗಳುಗಳ ಕಾಲ ಭಾರಿ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಮಳೆಯಿಂದಾಗಿ ಘಾಟಿಯಲ್ಲಿ ಅಲ್ಲಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221 (A) (2) ಮತ್ತು (5) ಅನ್ವಯ, ರಾಷ್ಟ್ರೀಯ ಹೆದ್ದಾರಿ 169A ಆಗುಂಬೆ ಘಾಟಿಯ ಮೂಲಕ ಜೂನ್ 15ರಿಂದ ಸೆಪ್ಟೆಂಬರ್ 30ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುತ್ತದೆ.
ಸೆ.30ರ ವರೆಗೆ ಭಾರೀ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ. ಇನ್ನು, ಭಾರಿ ವಾಹನಗಳು ಎಂದರೆ ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ಲಾರಿ, ಟಿಪ್ಪರ್‌ನಂತಹ ವಾಹನಗಳ ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿಲಾಗಿದೆ. ಹೀಗಾಗಿ ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು, ಭಾರೀ ವಾಹನಗಳಿಗೆ ಆಗುಂಬೆ ಘಾಟಿ ನಿಷೇಧ ಹೇರಿದರೆ ವಾಹನಗಳು ಬದಲಿ ಮಾರ್ಗವಾಗಿ ಸಂಚರಿಸಬೇಕಿದೆ. ಇದನ್ನೂ ಸಹ ತಿಳಿಸಲಾಗಿದ್ದು, ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.