ಮುಂಬೈ:- ಇಂದು ಸಂಜೆಗೆ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯ ಘಟಕಗಳ ಬಿಜೆಪಿ ಅಧ್ಯಕ್ಷರ ಘೋಷಣೆಗೆ ಸಮಯ ನಿಗದಿಯಾಗಿದೆ.
ಕರ್ನಾಟಕ ಬಿಜೆಪಿ ಸಾರಥಿ ಬಿವೈವಿಯವರನ್ನು ಮುಂದುವರಿಸಬೇಕಾ, ಬೇಡವಾ ಎಂಬ ಚರ್ಚೆ 6ತಿಂಗಳಿನಿಂದಲೂ ನಡೆಯುತ್ತಿದ್ದು ಅದೀಗ ಅಂತಿಮ ಘಟ್ಟಕ್ಕೆ ಬಂದಂತಾಗಿದೆ.
ಕರ್ನಾಟಕದಲ್ಲಿ ಇಂದು ಅಥವಾ ನಾಳೆ ರಾಜ್ಯಾಧ್ಯಕ್ಷರ ನೇಮಕಾತಿ ಘೋಷಿಸುವ ಸಾಧ್ಯತೆ ಇದೆ, ಹಾಲಿ ಅಧ್ಯಕ್ಷ ವಿಜಯೇಂದ್ರ ಭವಿಷ್ಯವೂ ನಿರ್ಧಾರವಾಗಲಿದೆ. ಆದರೆ, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ ವ್ಯಂಗ್ಯವಾಡಿದ್ದು, ವಿಜಯೇಂದ್ರ ಮುಂದುವರೆಸಿದರೆ ಹೊಸ ಪಕ್ಷ ಕಟ್ಟುವ ಬಗ್ಗೆ ಚಿಂತಿಸುವುದಾಗಿ ಹೇಳಿದ್ದಾರೆ. ಈ ಮಧ್ಯೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೆಸರು ಕೇಳಿ ಬರುತ್ತಿದ್ದಂತೆಯೇ, ಪಕ್ಷದ ಹಿರಿಯ ಮುಖಂಡ ತೋಟದಪ್ಪ ಬಸವರಾಜು ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಘೋಷಣೆ ಎಂಬುದು ಬಿಜೆಪಿಗೆ ಗಜ ಪ್ರಸವದಂತಾಗಿದೆ. ಏತನ್ಮಧ್ಯೆ, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮೂಲಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ.