ಉಡುಪಿ

ಇಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಚೈತ್ರಾ ಕುಂದಾಪುರ

ಉಡುಪಿ:- ಬಿಗ್‌ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆ ಸಂಭ್ರಮದಲ್ಲಿದ್ದ ಚೈತ್ರಾ ಕುಂದಾಪುರ ಸಪ್ತಪದಿ ತುಳಿಯಲಿರುವ ವರನ ಬಗ್ಗೆ ಮಾಹಿತಿ ಕೊಟ್ಟಿರಲಿಲ್ಲ. ಕೇವಲ ಮದುವೆ ಆಗುವುದಾಗಿ ಅಷ್ಟೇ ಹೇಳಿದ್ದರು. ಇನ್ನೇನು ಮದುವೆ ಒಂದು ದಿನ ಇದೆ ಎನ್ನುವಾಗಲೇ ವರನನ್ನು ಪರಿಚಯಿಸಿದ್ದಾರೆ.

ಚೈತ್ರಾ ಕುಂದಾಪುರ ಮದುವೆ ಇಂದು ನಡೆಯಲಿದೆ, ಅದಕ್ಕೂ ಮುನ್ನ ಮೆಹಂದಿ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಆಗಲೂ ಅವರು ಮದುವೆ ಆಗುತ್ತಿರುವ ಹುಡುಗನ ಬಗ್ಗೆ ಮಾಹಿತಿಯನ್ನು ನೀಡಿರಲಿಲ್ಲ.

ತನ್ನ ಇನ್‌ಸ್ಟಾಗ್ರಾಂನಲ್ಲಿ ಪ್ರೀ ವೆಡ್ಡಿಂಗ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಸಪ್ತಪದಿ ತುಳಿಯಲಿರುವ ಹುಡುಗನ ಪರಿಚಯ ಮಾಡಿಕೊಟ್ಟಿದ್ದಾರೆ. ಚೈತ್ರಾ ಕುಂದಾಪುರ ಇಂದು ಶ್ರೀಕಾಂತ್ ಕಶ್ಯಪ್ ಎಂಬುವವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸದ್ಯ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.