ಬೆಂಗಳೂರು

ಎನ್.ಆರ್.ಪುರ ರಸ್ತೆ ಅಗಲೀಕರಣಕ್ಕೆ 60 ಕೋಟಿ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮುಖ್ಯರಸ್ತೆ ಬಸ್ ನಿಲ್ದಾಣದಿಂದ ಟಿ.ಬಿ ರಸ್ತೆಯವರೆಗೆ ರಸ್ತೆ ಆಗಲೀಕರಣಕ್ಕೆ ಇಂದು ಸಂಪುಟ ಸಭೆಯಲ್ಲಿ 60.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಗಲೀಕರಣ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಜೊತೆಗೆ ರಾಜ್ಯದ ವಿವಿಧ ಜಿಲ್ಲೆಯ ಕಾಮಗಾರಿಗಳು ಜೂನ್ 04 ರಂದು ಆರ್.ಸಿ.ಬಿ ಕ್ರಿಕೆಟ್ ತಂಡದ ವಿಜಯೋತ್ಸವ ಸಮಾರಂಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾರವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯನ್ನು ಅಧ್ಯಯನ ಮಾಡಲಾಗುತ್ತದೆ. ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ.