ಚಿಕ್ಕಮಗಳೂರು:- ಜಿಲ್ಲೆಯ ನರಸಿಂಹರಾಜಪುರ ಪಟ್ಟಣ ವ್ಯಾಪ್ತಿಯ ಬಸ್ ನಿಲ್ದಾಣದಿಂದ ನೇರವಾಗಿ ಪ್ರವಾಸಿ ಮಂದಿರದವರೆಗೆ ಹಾಗೂ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗದಿಂದ ಸುಂಕದಕಟ್ಟೆಯವರೆಗೆ ಲೋಕೋಪಯೋಗಿ ಇಲಾಖೆಯಿಂದ ಮುಖ್ಯರಸ್ತೆಯ ಎರಡೂ ಬದಿಯ ಅಗಲೀಕರಣ ಮಾಡುವ ಸಂಬಂಧ ಈ ಪ್ರದೇಶದ ಆಸ್ತಿಗಳ ಖಾತೆದಾರರೊಂದಿಗೆ ಸಮಾಲೋಚನೆ ನಡೆಯಲಿದೆ.
ಸೆಪ್ಟೆಂಬರ್ 03 ರಂದು ಬೆಳಿಗ್ಗೆ 10.30ಕ್ಕೆ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಗೌಡರು ಸೇರಿದಂತೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ.ಶ್ರೀನಿವಾಸ್, ಭದ್ರಾ ಅಭಿವೃದ್ಧಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಂಶುಮಂತ್ ಗೌಡ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಜುಬೇದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಎಲ್ ಶೆಟ್ಟಿಯವರು ಮತ್ತು ಸದಸ್ಯರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ ಎಂದು ಪಟ್ಟಣ ಪಂಚಾಯಿತಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.
Leave feedback about this