ದಕ್ಷಿಣ ಕನ್ನಡ

ಎಸ್‌ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಎಸ್ಐಟಿ ತನಿಖೆಗೆ ಸೂಕ್ತವಲ್ಲ.- ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ

ಮಂಗಳೂರು:- ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣವ್ ಮೊಹಂತಿ‌ ಅವರು ಅತ್ಯಾಚಾರ ಮತ್ತು ನರಹತ್ಯೆ ಕುರಿತಾದ ತನಿಖೆಗೆ ಸೂಕ್ತ ವ್ಯಕ್ತಿಯಲ್ಲ. ಮೊಹಂತಿ ನೇಮಕದಲ್ಲಿ ಕೆ.ಜೆ.ಜಾರ್ಜ್ ಕೈವಾಡವಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಮೊಹಂತಿ ನೇಮಕದಿಂದ ಪೊಲೀಸರ ನೈತಿಕ ಬಲ ಕುಗ್ಗಿದೆ ಎಂದು ಆರೋಪಿಸಿದರು.

ಡಿವೈಎಸ್ ಪಿ ಗಣಪತಿಯವರು ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆ.ಜೆ.ಜಾರ್ಜ್ ಜತೆ ಐಪಿಎಸ್ ಅಧಿಕಾರಿ ಎ.ಎಂ.ಪ್ರಸಾದ್ ಮತ್ತು ಪ್ರಣವ್ ಮೊಹಂತಿಯವರ ಹೆಸರನ್ನೂ ಸಹ ಉಲ್ಲೇಖಿಸಿದ್ದರು ಎಂದು ಅನುಪಮಾ ಶೆಣೈ ಹೇಳಿದರು. ದಯಾನಂದ ಅಥವಾ ಡಿಜಿಪಿ ಡಾ.ಕೆ. ರಾಮಚಂದ್ರ ರಾವ್ ಅವರನ್ನು ತನಿಖಾ ತಂಡದ ಉಸ್ತುವಾರಿಯಾಗಿ ನೇಮಕ ಮಾಡಬೇಕು ಎಂದು ಶೆಣೈ ಆಗ್ರಹಿಸಿದರು.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video