ಬೆಂಗಳೂರು:- ರಾಜ್ಯದ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಸಿ ದರ್ಜೆಯ 10 ಗಣಿಗಳಲ್ಲಿ ಅಕ್ರಮ ಗಣಿಗಾರಿಕೆ ಕೈಗೊಂಡಿರುವ ಪ್ರಕರಣದ ಬಗೆಗಿನ ತನಿಖೆಗೆ ರಚಿಸಿದ್ದ ಲೋಕಾಯುಕ್ತ ವಿಶೇಷ ತನಿಖಾ ತಂಡದ ಅವಧಿಯನ್ನು ಜು.1ರಿಂದ ಮತ್ತೊಂದು ವರ್ಷದ ಅವಧಿಗೆ ವಿಸ್ತರಿಸುವ ಬಗ್ಗೆ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸುವ ಸಾಧ್ಯತೆಯಿದೆ.
ಗಣಿ ಪ್ರದೇಶದಲ್ಲಿ ಶೇ.15ಕ್ಕಿಂತ ಹೆಚ್ಚು ಪ್ರಮಾಣದ ನಿಯಮ ಉಲ್ಲಂಘನೆ, ಗಡಿಯ ಹೊರಗೆ ಅಕ್ರಮ ಗಣಿಗಾರಿಕೆ ನಡೆದ ಗಣಿ ಗುತ್ತಿಗೆಗಳನ್ನು ಸಿ ದರ್ಜೆಯಡಿ ಗುರುತಿಸಲಾಗಿತ್ತು. ಈ ಪೈಕಿ 10 ಗಣಿ ಪ್ರದೇಶದಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಎಸ್‌ಐಟಿಗೆ ವಹಿಸಲು ತೀರ್ಮಾನಿಸಲಾಗಿತ್ತು. ಇದರ ಅವಧಿಯನ್ನು ವಿಸ್ತರಿಸಲು ಸರ್ಕಾರ ಮುಂದಾಗಿದೆ.