ಬೆಂಗಳೂರು

ಜಿಎಸ್‌ಟಿ ನೊಟೀಸ್: ಸಣ್ಣ ವ್ಯಾಪಾರಿಗಳೊಂದಿಗೆ ಮುಖ್ಯಮಂತ್ರಿಯ ಸಭೆ ಸಫಲ

ಬೆಂಗಳೂರು:- ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎದುರಾಗಿದ್ದ ಫೋನ್ ಪೇ ಹಾಗೂ ಗೂಗಲ್ ಪೇ ಸೇರಿದಂತೆ ಯುಪಿಐ ಪೇಮೆಂಟ್ ಬಳಕೆದಾರರ ಗೊಂದಲ ಕೊನೆಗೂ ಇತ್ಯಾರ್ಥವಾಗುವ ಹಂತಕ್ಕೆ ಬಂದಿದೆ. ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ವ್ಯಾಪಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಬಂದ್ ಮಾಡುವ ನಿರ್ಧಾರವನ್ನು ವ್ಯಾಪಾರಿಗಳು ಕೈಬಿಟ್ಟಿದ್ದಾರೆ.

ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೊಟೀಸ್ ಕುರಿತು ಗೊಂದಲ ಇತ್ತು. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ. ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ, ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ, ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ, ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜಿಎಸ್‌ಟಿ ನೊಟೀಸ್‌ಗಳನ್ನು ನಿಯಮಾನುಸಾರವಾಗಿಯೇ ನೀಡಲಾಗಿದೆ. ಆದರೆ, ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್‌ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ವ್ಯಾಪಾರ ವಹಿವಾಟು ಬಂದ್ ಇಲ್ಲ: ಇನ್ನು ಫೋನ್ ಪೇ ಹಾಗೂ ಗೂಗಲ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್‌ನಲ್ಲಿ ಉಂಟಾಗಿರುವ ಗೊಂದಲ ಹಾಗೂ ಜಿಎಸ್‌ಟಿ ಪಾವತಿ ಮಾಡಬೇಕು ಎನ್ನುವುದನ್ನು ವಿರೋಧಿಸಿ ಕರ್ನಾಟಕ ಮತ್ತು ಬೆಂಗಳೂರು ಬಂದ್‌ಗೆ ಕೆಲವು ವ್ಯಾಪಾರಿಗಳು ಕರೆ ನೀಡಿದ್ದರು. ಆದರೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಭೆ ನಡೆದಿರುವುದರಿಂದ ನಿರ್ಧಾರವನ್ನು ಕೈಬಿಡಲಾಗಿದೆ. ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video