ಬೆಂಗಳೂರು:- ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು (ವಿರೋಧ ಪಕ್ಷದ ನಾಯಕರು) ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಶೀಘ್ರ ಗುಣಮುಖರಾಗಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಯು ಬಿ ವೆಂಕಟೇಶ್ ರವರು ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಪಾಷರವರು ಮಹಾಸಭೆಯ ರಾಷ್ಟ್ರೀಯ ಕಾರ್ಯದರ್ಶಿಗಳಾದ ಎಚ್.ಎಂ ರೇಣುಕ ಪ್ರಸನ್ನ ಅವರು ಉಪಸ್ಥಿತದ್ದರು.
Leave feedback about this