ಹಾಸನ:- ಕೊಡಿಮಠ ಶ್ರೀಗಳು ಮಳೆ, ಬೆಳೆ, ರಾಜಕೀಯದ ಬಗ್ಗೆ ಆಗಾಗ ಸ್ಫೋಟಕ ಭವಿಷ್ಯಗಳನ್ನು ನುಡಿಯುತ್ತಿರುತ್ತಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಅಲೆ ಎದ್ದಿದ್ದು, ಈ ಹಿನ್ನೆಲೆ ಡಿ.ಕೆ ಶಿವಕುಮಾರ್ ಕೋಡಿಮಠದ ಶ್ರೀಗಳನ್ನು ಭೇಟಿ ಮಾಡಿದರು.
ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜ್ಯಕೀಯದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎನ್ನುವ ಹೇಳಿಕೆಯನ್ನು ನೀಡುತ್ತಲಿದ್ದಾರೆ. ಅಲ್ಲದೆ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೋಡಿ ಶ್ರೀ ಭೇಟಿ ಮಾಡಿದರು.
ಹಾಸನ ಜಿಲ್ಲೆಯಲ್ಲಿನ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಡಿಮಠದ ಶ್ರೀಗಳನ್ನು ಭೇಟಿ ಆದರು. ಈ ಭೇಟಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದು, ಶ್ರೀಗಳು ಮುಂದಿನ ಸಿಎಂ ಬಗ್ಗೆ ಕೊಟ್ಟ ಸೂಚನೆ ಏನು ಎಂಬ ಪ್ರಶ್ನೆ ಬಹುತೇಕರಲ್ಲಿ ಮೂಡಿದೆ. ಇದೆಲ್ಲದಕ್ಕೂ ಉತ್ತರ ಇಲ್ಲಿ ತಿಳಿಯಿರಿ.
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಇತ್ತೀಚೆಗೆ ಅರಸೀಕೆರೆ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯವನ್ನು ನುಡಿದಿದ್ದರು. ಹಾಲು ಕೆಟ್ಟರೂ, ಹಾಲುಮತ ಸಮುದಾಯ ಕೆಡುವುದಿಲ್ಲ ಎಂದು ಹೇಳಿದ್ದರು. ಅಂದರೆ, ಸಿದ್ದರಾಮಯ್ಯ ಅವರು ಅವರಾಗಿಯೇ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕು. ಬಲವಂತವಾಗಿ ಅವರನ್ನು ಇಳಿಸಲು ಸಾಧ್ಯ ಇಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆ ಡಿಕೆಶಿ, ಕೋಡಿ ಶ್ರೀಗಳನ್ನು ಭೇಟಿ ಆಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಹಾಸನ ಜಿಲ್ಲೆಯ ಅರಸೀಕೆರೆಯ ಕೋಡಿ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದು, ಶಿವಲಿಂಗ ಅಜ್ಜಯ್ಯ ಗದ್ದುಗೆಗೆ ಪೂಜೆ ಸಲ್ಲಿಸಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಇದೇ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಎಲ್ಲರ ಸಂಸ್ಕೃತಿಗೆ ಬೆಲೆ ಕೊಡುತ್ತೇವೆ ಎಂದು ಹೇಳಿದ್ದಾರೆ.
ನನಗೆ ಧರ್ಮ, ದೇವರು, ಸಂಸ್ಕೃತಿಯ ಬಗ್ಗೆ ನಮ್ಮ ಆಚಾರ-ವಿಚಾರಗಳ ಬಗ್ಗೆ ನಂಬಿಕೆ ಸ್ವಲ್ಪ ಹೆಚ್ಚಾಗೇ ಇದೆ. ಯಾವುದೇ ಧರ್ಮದ, ಯಾವುದೇ ಪದ್ದತಿಗಳು, ತನ್ನದೇ ಆದಂತಹ ಶಕ್ತಿಯನ್ನು ಹೊಂದಿದೆ. ಕೆಲವರು ನಂಬದೇ ಇರಬಹುದು, ಆದರೆ ಇದನ್ನು ನಂಬುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋಡಿ ಶ್ರೀಗಳನ್ನು ಭೇಟಿಯಾದ ಬಳಿಕ ಹೇಳಿದರು.
ಅಲ್ಲದೆ, ತುಂಬಾ ವರ್ಷಗಳ ಬಳಿಕ ಬಳಿಕ ಇಲ್ಲಿಗೆ ಬಂದಿದ್ದೇನೆ. ಕೋಡಿಶ್ರೀಗಳು ಮಠದಲ್ಲೇ ಇದ್ದಾರೆ ಎನ್ನುವ ಮಾಹಿತಿ ಸಿಕ್ಕಿತು. ಆದ್ದರಿಂದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದೇನೆ. ಎಲ್ಲವೂ ಒಳ್ಳೆದಾಗುತ್ತದೆ ಎನ್ನುವ ನಂಬಿಕೆ ಇದೆ ಎಂದು ಅಂತಲೂ ಹೇಳಿದರು.
ಸರ್ಕಾರಿ ಕಾರ್ಯಕ್ರಮ ನಿಮಿತ್ತ ಅರಸೀಕೆರೆಗೆ ಸಿಎಂ ಸಿದ್ದರಾಮಯ್ಯ ಜೊತೆ ಹೆಲಿಕಾಪ್ಟರ್‌ನಲ್ಲಿ ಬಂದಿದ್ದ ಡಿ.ಕೆ.ಶಿವಕುಮಾರ್ ನಂತರ ಅಲ್ಲಿಂದ ದೇವಾಲಯಗಳಿಗೆ ಭೇಟಿ ನೀಡಿದ್ದು, ಅರಸೀಕೆರೆ ಜೇನುಕಲ್ಲು ಸಿದ್ದೇಶ್ವರ ಬೆಟ್ಟದ ಮೆಟ್ಟಿಲುಗಳಿಗೆ, ಬಳಿಕ ಜೇನುಕಲ್ಲು ಸಿದ್ದೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಬಳಿಕ ಕೋಡಿಮಠಕ್ಕೆ ಭೇಟಿ ನೀಡಿ ಬಂದ ವೇಳೆ ಮಾಧ್ಯಮದವರು ಪ್ರಶ್ನೆ ಕೇಳುವಾಗ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಎಂಬ ಘೋಷಣೆಗಳನ್ನು ಕೂಗತೊಡಗಿದರು. ಈ ವೇಳೆ ಅವರು ಕಾರ್ಯಕರ್ತರನ್ನು ಸುಮ್ಮನಿರುವಂತೆ ಹೇಳಿ ಗಮನ ಸೆಳೆದರು.
Leave feedback about this