ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಬೆದರಿಕೆ ಒಡ್ಡುವ ಕುತಂತ್ರಗಳನ್ನು ಮಾಡಿ ಸಾಧನಾ ಸಮಾವೇಶ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಾ ಅಸ್ತಿತ್ವ ಉಳಿಸಿಕೊಳ್ಳುವ ಸಲುವಾಗಿ ಅಹಿಂದ ಸಮುದಾಯಗಳನ್ನು ಮುಂದೆ ಇಡುತ್ತಾರೆ. ಆ ಸಮುದಾಯಗಳನ್ನು ಮುಂದೆ ಇಟ್ಟುಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಮಾವೇಶ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಎರಡೂವರೆ ವರ್ಷದ ಆಡಳಿತದಲ್ಲಿ ಸಾಧನೆ ಶೂನ್ಯ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಸಾಧನೆ ಮಾಡಿದ್ದರೆ ರಾಜ್ಯದ ಉಸ್ತುವಾರಿ ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬಂದು ಶಾಸಕರನ್ನು ಮಾತನಾಡಿಸುವ ಮತ್ತು ಅವರ ಅಸಮಾಧಾನ ಹೋಗಲಾಡಿಸುವ ಪ್ರಮೇಯ ಉದ್ಭವಿಸುತ್ತಿರಲಿಲ್ಲ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
Leave feedback about this