ಉಡುಪಿ:- ಪೊಲೀಸರು ಒಳ್ಳೆಯ ಕೆಲಸ ಮಾಡಿದಾಗ ಹೊಗಳಿದ್ದೇನೆ. ತಪ್ಪು ಕೆಲಸ ಮಾಡಿದಾಗ ತಪ್ಪು ಎಂದು ಹೇಳಿದ್ದೇನೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಫರೀದ್ ಹೇಳಿದ್ದಾರೆ.
ಜಿಲ್ಲೆಯ ಸವಣೂರಿನ ಕುದ್ಮಾರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಮಂಗಳೂರಿನ ಹಿಂದಿನ ಪೊಲೀಸ್ ಆಯುಕ್ತ ಹಾಗೂ ಜಿಲ್ಲೆಯ ಎಸ್‌ಪಿ ಅವರನ್ನು ತನಿಖೆಗೆ ಒಳಪಡಿಸಬೇಕೆಂಬ ತಮ್ಮ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆಯಲ್ಲಿ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದೇನೆ ಎಂದರಲ್ಲದೇ ಎಲ್ಲವನ್ನೂ ರಾಜಕೀಯ ನೆಲೆಯಿಂದ ನೋಡಬಾರದು ಎಂದು ಹೇಳಿದ ಅವರು, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ನಾವು ಹೆಚ್ಚು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಇತ್ತೀಚೆಗೆ ನಡೆದ ಪ್ರಕೃತಿ ವಿಕೋಪ ಸ್ಥಳಗಳಿಗೆ ಅಧಿಕಾರಿಗಳು ತಕ್ಷಣ ತೆರಳಿ ಪರಿಹಾರ ನೀಡುವುದಲ್ಲದೇ, ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸುವೆ ಎಂದು ತಿಳಿಸಿದ್ದಾರೆ.