ದಕ್ಷಿಣ ಕನ್ನಡ

ದಕ್ಷಿಣ ಕನ್ನಡ: ಭಾರೀ ಗಾಳಿ-ಮಳೆಯ ಹಿನ್ನೆಲೆ ಮೂರು ತಾಲ್ಲೂಕಿಗೆ ರಜಾ ಘೋಷಣೆ

ಮಂಗಳೂರು:- ಭಾರೀ ಗಾಳಿ–ಮಳೆಯಾಗುವ ಮುನ್ಸೂಚನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರೂ ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ – ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ. ಮೂಡುಬಿದಿರೆ ಹಾಗೂ ಮಂಗಳೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ಧಾರ್ ಆದೇಶ ಹೊರಡಿಸಿದ್ದಾರೆ.

ನಾಲ್ಕೈದು ದಿನ ನಿರಂತರ ಮಳೆ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಇಂದಿನಿಂದ ಜು.26 ರ ಬೆಳಗ್ಗೆವರೆಗೂ ರೆಡ್‌ ಅಲರ್ಟ್‌ ಇರಲಿದೆ. ಅನಂತರ ಜು.30 ರವರೆಗೆ ಆರೆಂಜ್‌ ಅಲರ್ಟ್‌ ಇರಲಿದೆ. ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯೂ ಇರಲಿದೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video