ಮೈಸೂರು

ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಂಸದ ಯದುವೀರ್‌

ಮೈಸೂರು:- ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಸ್ಥಳ ಪರಿಶೀಲನೆ ನಡೆಸಿದ ಸಂಸದ ಯದುವೀರ್‌ ವಸ್ತುಪ್ರದರ್ಶನದ ಆವರಣದಲ್ಲಿ ನೂತನ ಯುನಿಟಿ ಮಾಲ್‌ ನಿರ್ಮಾಣ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಯೋಜನಯಡಿ 193 ಕೋಟಿ ವೆಚ್ಚದಲ್ಲಿ ಯುನಿಟಿ ಮಾಲ್‌ ನಿರ್ಮಾಣಗೊಳ್ಳುತ್ತಿದ್ದು, ಸಂಸದ ಯದುವೀರ್‌ ಒಡೆಯರ್‌ ಗೆ ಶಾಸಕ ಶ್ರೀವತ್ಸ ಸಾಥ್‌ ನೀಡಿದ್ದರು.

ಮೈಸೂರಿನ ವಸ್ತು ಪ್ರದರ್ಶನದ ಆವರಣದ ಮಾಲ್‌ ನಲ್ಲಿ 99 ಮಳಿಗೆಗಳು ಇರುತ್ತದೆ. ಮೈಸೂರಿನ ಪರಂಪರೆ ಸಾರುವ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರಿನ ವಸ್ತುಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಎಲ್ಲಾ ರೀತಿಯ ಅಂಗಡಿಗಳನ್ನು ಕೂಡ ಇಲ್ಲಿ ತೆರೆಯಲು ನಿರ್ಧಾರ ಮಾಡಲಾಗಿದೆ. ಸ್ಥಳೀಯ ಉತ್ಪನ್ನಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ಇದಕ್ಕೆ ರಾಜ್ಯ ಸರ್ಕಾರ ಜಾಗ ನೀಡಿದೆ. ಕೇಂದ್ರ ಸರ್ಕಾರ ಸಂಪೂರ್ಣ ಹಣ ನೀಡುತ್ತೆ. ಆರೂವರೆ ಎಕರೆ ಜಾಗದಲ್ಲಿ ಈ ಮಾಲ್‌ ನಿರ್ಮಾಣ ಆಗತ್ತದೆ ಎಂದರು. ಪಾರ್ಕಿಂಗ್‌ ಸೇರಿ ಎಲ್ಲವೂ ಕೂಡ ಇಲ್ಲೇ ಆಗುತ್ತದೆ ಎಂದರು.

ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಸಲುವಾಗಿ ಮಾಲ್‌ ನಿರ್ಮಾಣ ಮಾಡುತ್ತಿದ್ದೇವೆ. ಹೆಚ್ಚಿನ ಜನ ಮುಂದಿನ ದಿನಗಳಲ್ಲಿ ಇಲ್ಲಿ ಬರುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಇಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸುತ್ತೇವೆ. ವಾರಾಂತ್ಯದಲ್ಲಿ ಸಂತೆಗಳನ್ನು ಕೂಡ ಆಯೋಜಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.

ಚುನಾವಣೆ ಸಂದರ್ಭದಲ್ಲಿ ಸಿಎಂ ಮೈಸೂರನ್ನು ತವರು ಜಿಲ್ಲೆ ಅಂತ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ. ಅದೇ ಗಂಭೀರತೆಯನ್ನು ಚುನಾವಣೆ ಇಲ್ಲದಿದ್ದಾಗ ತೋರಿಸಬೇಕು. ಅ ಭಾಗದ ಶಾಸಕರು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video