Uncategorized

ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಧ್ವಜಾರೋಹಣ

ದೆಹಲಿ:- 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು.

ಕೇಸರಿ ಬಣ್ಣದ ಕೋಟು ಮತ್ತು ಪೇಟ ಧರಿಸಿದ್ದ ಪ್ರಧಾನಿ ಧ್ವಜಾರೋಹಣಕ್ಕೂ ಮೊದಲು ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ, ಭಾರತೀಯ ವಾಯುಪಡೆಯ ಎರಡು Mi-17 ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಪುಷ್ಪಮಳೆ ಸುರಿಸಿದವು. ಒಂದು ಹೆಲಿಕಾಪ್ಟರ್‌ ಧ್ವಜದೊಂದಿಗೆ ಹಾರಿದರೆ, ಇನ್ನೊಂದು ಹೆಲಿಕಾಪ್ಟರ್‌ನಲ್ಲಿ ಆಪರೇಷನ್ ಸಿಂಧೂರ ಬ್ಯಾನರ್ ಅನ್ನು ಪ್ರದರ್ಶಿಸಲಾಗಿದೆ.

ಈ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯ ಥೀಮ್ ‘ನಯಾ ಭಾರತ್’ ಆಗಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿಯತ್ತ ದೇಶವನ್ನು ಮುನ್ನಡೆಸುವ ಗುರಿ ಹೊಂದಲಾಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಚಿವಾಲಯದಿಂದ ವಿವಿಧ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 210 ಪಂಚಾಯತ್ ಪ್ರತಿನಿಧಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಈ ವರ್ಷದ ವಿಶೇಷ ತಮ್ಮ ಗ್ರಾಮ ಪಂಚಾಯತ್‌ಗಳಲ್ಲಿ ಸುಧಾರಣೆಗಳನ್ನು ತಂದಿರುವ ನಾಯಕರು ಭಾಗಿಯಾಗಿದ್ದು, ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪಂಚಾಯತ್ ನಾಯಕಿಯರು ಸೇರಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video