ಮೈಸೂರು:- ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಗೆ ದರ್ಶನ್ ಅಭಿಮಾನಿಗಳ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಯದುವೀರ್,ನಾನು ಕೂಡ ಅಂತಹ ಟೀಕೆಗಳನ್ನು ಅನುಭವಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲೋ ಕುಳಿತುಕೊಂಡು ಕಮೆಂಟ್ ಹಾಕುತ್ತಾರೆ. ಅಂತವರಿಗೆ ಏನು ಮಾಡೋಕಾಗತ್ತೆ. ನಾವು ನಮ್ಮ ಕೆಲಸ ಮಾಡಿಕೊಂಡು ಹೋಗಬೇಕು ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ಮಾಡುತ್ತಿದೆ, ತೀರ್ಪು ಬರುವವರೆಗೂ ನಾವು ಯಾರು ಅದಕ್ಕೆ ಪ್ರತಿಕ್ರಿಯೆ ನೀಡಬಾರದು. ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಗಳನ್ನ ನಿರ್ಲಕ್ಷ ಮಾಡಬೇಕಷ್ಟೆ ಎಂದಿದ್ದಾರೆ.
ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ ಹಿನ್ನೆಲೆಯಲ್ಲಿ ಮಾತನಾಡಿ, ಇದೊಂದು ಒಳ್ಳೆಯ ಕಾರ್ಯಾಚರಣೆ. ಡ್ರಗ್ಸ್ಅನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇವೆ. ಪೊಲೀಸರು ಕೂಡ ಇನ್ನೂ ಹೆಚ್ಚಿನದಾಗಿ ಕೆಲಸ ಮಾಡಬೇಕು. ಡ್ರಗ್ಸ್ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಯದುವೀರ್ ತಿಳಿಸಿದರು.
ನರಸಿಂಹರಾಜ ಕ್ಷೇತ್ರದಲ್ಲಿ ಇಂತಹ ಅನೇಕ ದೂರುಗಳು ದಿನನಿತ್ಯ ಬರತ್ತದೆ. ಡ್ರಗ್ಸ್ ಮಾರಾಟ ಎಲ್ಲ ಕಡೆ ಆಗುತ್ತಿದೆ ಅನ್ನುವ ಆರೋಪ ಕೇಳಿ ಬಂದಿದೆ. ನರಸಿಂಹರಾಜ ಕ್ಷೇತ್ರದ ಜನಪ್ರತಿನಿಧಿಗಳು ಅಲ್ಲಿನ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸವಾಲಾಗಿ ಸ್ವೀಕರಿಸಿ ಜನರ ನಂಬಿಕೆ ಉಳಿಸಿಕೊಳ್ಳಬೇಕು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
Leave feedback about this