ಬೆಂಗಳೂರು:- ನಗರದ ಕೆಂಗೇರಿ ರಿಂಗ್ ರೋಡಿನಲ್ಲಿರುವ ಸಾಹಸ ಸಿಂಹ, ನಟ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದ್ದು, ಸರ್ಕಾರ ಮತ್ತು ಪೊಲೀಸರ ವಿರುದ್ಧ ಅಭಿಮಾನಿಗಳು ಬೇಸರ ಹೊರ ಹಾಕಿದ್ದಾರೆ .
ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾದ ಹಿನ್ನೆಲೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿ ತೆರವುಗೊಳಿಸಲಾಗಿದೆ. ಮೈಸೂರಿನಲ್ಲಿ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲಾಗಿದೆ. ರಿಂಗ್ ರೋಡ್ ನಲ್ಲಿರುವ ಸಾಹಸ ಸಿಂಹ, ನಟ ಡಾ.ವಿಷ್ಣುವರ್ಧನ್ ಅವರ ಮೂಲ ಸಮಾಧಿ ನೆಲಸಮಗೊಳಿಸಲಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.
Leave feedback about this