ಮೈಸೂರು:- ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಸಿಎಂ ಸಿದ್ದರಾಮಯ್ಯ ಹೋಲಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್ ನಾಯಕತ್ವ ಇರೋದು ಕೆಲಸ ಮಾಡೋಕೆ ಹೋಲಿಕೆ ಮಾಡೋಕಲ್ಲ, ನಾನು ಸಂಸದನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ನನ್ನ ಹಿಂದಿನವರು ಏನು ಮಾಡಿದರು ಅದನ್ನು ನಾನು ಹೋಲಿಕೆ ಮಾಡಲ್ಲ. ನನ್ನ ಆಲೋಚನೆಗಳ ಪ್ರಕಾರ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಯದುವೀರ್, ಸರ್ಕಾರದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ, ಯತೀಂದ್ರ ಹೇಳಿಕೆ ಖಂಡಿಸಿ ಪ್ರತಿಭಟನೆಗಳು ಆಗ್ತೀವೆ. ಕ್ಷಮೆ ಕೇಳುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಕ್ಷಮೆ ಕೇಳೋದು ಬಿಡೋದು ಅವರಿಗೆ ಬಿಟ್ಟಿದ್ದು. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರು ಅಭಿವೃದ್ಧಿ ವಿಚಾರವಾಗಿ ಪುತ್ರ ಯತೀಂದ್ರ ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ್‌ರನ್ನು ಹಿಂದಿಕ್ಕಿ ರಾಜ್ಯ ಅಭಿವೃದ್ಧಿ ಹೊಂದುತ್ತಿರುವುದು ಸಿಎಂ ಸಿದ್ದರಾಮಯ್ಯರವರಿಂದ ಎಂದು ಯತೀಂದ್ರ ಮಾಧ್ಯಮಕ್ಕೆ ಹೇಳಿಕೆಯೊಂದನ್ನು ನೀಡಿದ್ದರು. ಈ ವಿಚಾರವಾಗಿ ಪರ,ವಿರೋಧ ಚರ್ಚೆ ಜೋರಾಗಿಯೇ ನಡೆಯಿತು.
Leave feedback about this