ಮೈಸೂರು

ನವೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ: ಭವಿಷ್ಯ ನುಡಿದ ವಿಶ್ವನಾಥ್

ಮೈಸೂರು:- ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ. ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಡಿಸೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸ್ತೀರಿ ಎಂದು ಎಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ. ಅಲ್ಲದೇ ಮರು ಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ ಗೆ ಹೇಳಿದ್ದರೆ ಸಿದ್ದರಾಮಯ್ಯ ಹೀರೋ‌ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ, ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ‌ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.