ಬೆಂಗಳೂರು:- ದೆಹಲಿ ಪ್ರವಾಸದಿಂದ ವಾಪಸ್ಸಾದ ಉಪ ಮುಖ್ಯಮಂತ್ರಿ ಡಿಕೆಶಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯುನೈಟೆಡ್ ಜೊತೆ ಮಾತನಾಡಿದ್ದು, ಇನ್ನು ಐದು ವರ್ಷ ನಾನೇ ಸಿಎಂ ಆಗಿ ಇರುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೇನೆ, ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ಸಿಎಂ ಬದಲಾವಣೆ ವಿಚಾರವಾಗಿ ನಿಮ್ಮ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾನು ಮತ್ತೆ ಆ ವಿಚಾರ ಮಾತನಾಡುವುದು ಸರಿಯಲ್ಲ ಎಂದರು ಜೊತೆಗೆ ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದೆ ಎಂದಷ್ಟೆ ಹೇಳಿದರು.
