ಬೆಂಗಳೂರು:- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಶಾಕಿಂಗ್ ಘಟನೆ ನಡೆದಿದೆ. ಪಿ.ಜಿ ಮಾಲೀಕನೊಬ್ಬ ತನ್ನದೇ ಪಿಜಿಯಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ತನ್ನ ಕಾರಿನಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿರುವಂತಹ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿ ಪಿ.ಜಿ ಮಾಲೀಕ ಕೇವಲ 10 ದಿನಗಳ ಹಿಂದೆ ಪಿ.ಜಿಗೆ ಸೇರಿಕೊಂಡಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿ, ಕಾರಿನಲ್ಲಿ ಕರೆದುಕೊಂಡು ಹೋಗಿ ಆತ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದ್ದು, ಘಟನೆಯ ಕುರಿತು ವಿದ್ಯಾರ್ಥಿನಿ ಸೋಲದೇವನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
Leave feedback about this