ಬೆಂಗಳೂರು

ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ.- ಆರ್.ಆಶೋಕ್

ಬೆಂಗಳೂರು:- ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ. ಆದರೆ, ಯಾವುದೇ ಪತ್ರಕ್ಕೂ ಉತ್ತರ ಬಂದಿಲ್ಲ. ಈ ಹಿಂದೆ ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಅಂದಿನ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರಿಗೆ ಯಾವ ಮನೆ ಕೊಡಲಾಗಿತ್ತೋ ಅದೇ ಮನೆ ಕೊಡಿ ಎಂದು ಕೇಳಿದ್ದೇನೆ.

ಮಾಧ್ಯಮದೊಂದಿಗೆ ಮಾತನಾಡಿದ ಆಶೋಕ್ ರವರು ನೇರವಾಗಿ ಕೇಳುವುದರಲ್ಲಿ ತಪ್ಪೇನಿದೆ, ಎರಡು ವರ್ಷ ಆದರೂ ಇದುವೆರಗೂ ವಿರೋಧ ಪಕ್ಷದ ನಾಯಕನಿಗೆ ಅಧಿಕೃತ ಸರ್ಕಾರಿ ಮನೆ ಕೊಟ್ಟಿಲ್ಲ. ಇದು ಕಾಂಗ್ರೆಸ್ ಪಕ್ಷ ಶಿಷ್ಟಾಚಾರ ಪಾಲನೆ ಮಾಡುವ ಪರಿ ಎಂದು ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಆರ್‌ ಅಶೋಕ್‌ ಅವರು, ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ, ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.