ದಕ್ಷಿಣ ಕನ್ನಡ

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ: ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ

ಮಂಗಳೂರು:- ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ.ರಾವ್ ಎಂಬಾತ, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ.

ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ಬಳಿಕ ಕೈಕೊಟ್ಟಿದ್ದಾನೆ. ಯುವತಿ ಗರ್ಭವತಿಯಾಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿರುವ ಯುವಕ ನಾಪತ್ತೆಯಾಗಿದ್ದಾನೆ. ಯುವಕನಿಂದ ಮೋಸ ಹೋದ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಆರೋಪಿ ಯುವಕ ಮಗುವನ್ನು ಒಪ್ಪಿಕೊಳ್ಳಲು ಸಿದ್ಧನಿಲ್ಲ, ಈ ಹಿನ್ನೆಲೆಯಲ್ಲಿ ಆರೋಪಿ ಕೃಷ್ಣ ಜೆ.ರಾವ್ ವಿರುದ್ಧ ಲವ್-ಸೆಕ್ಸ್-ದೋಖಾ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಡಿಎನ್ ಎ ಪರೀಕ್ಷೆ ಮೂಲಕ ಪ್ರಕರಣ ಭೇದಿಸಲು ಮುಂದಾಗಿದ್ದಾರೆ.

ಯುವತಿಗೆ ಕೃಷ್ಣ ಜೆ.ರಾವ್, ಹೈಸ್ಕೂಲು ಓದುವಾಗಲೇ ಪರಿಚಯವಾಗಿದ್ದು, ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಕೃಷ್ಣ ಜೆ.ರಾವ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ತನ್ನ ಮನೆಗೆ ಕರೆದೊಯ್ದು 2024ರ ಅಕ್ಟೋಬರ್ ನಲ್ಲಿ ದೈಹಿಕ ಸಂಪರ್ಕ ನಡೆಸಿದ ಬಳಿಕ 2025 ರ ಜನವರಿಯಲ್ಲಿಯೂ ಪುನಃ ಮನೆಗೆ ಕರೆಸಿ ದೈಹಿಕ ಸಂಪರ್ಕ ನಡೆಸಿದ್ದು, ಯುವತಿ ಗರ್ಭವತಿಯಾಗಿದ್ದಾಳೆ. ಯುವತಿ ಗರ್ಭವತಿಯಾಗುತ್ತಿದ್ದಂತೆ ಆರೋಪಿ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸಂತ್ರಸ್ತೆ ಪುತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.