ವಿಜಯಪುರ

ಮಹಿಳಾ ವಿಶ್ವವಿದ್ಯಾಲಯದ ಮುಂಭಾಗ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ

ವಿಜಯಪುರ:- ಮಹಿಳಾ ವಿಶ್ವವಿದ್ಯಾಲಯದ ಮುಂಭಾಗ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹೌದು….ವಿಜಯಪುರ ನಗರದ ಹೊರವಲಯದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಹಾಗೂ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿದ್ದಾರೆ, ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಸೂಲಿಗೆ ಇಳಿದಿದ್ದಾರೆ ಎಂದು ಆರೋಪಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.