ಬೆಂಗಳೂರು

ಮಾನ್ಯತೆ ಪಡೆಯದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್

ಬೆಂಗಳೂರು:- ರಾಜ್ಯದ ಗ್ರಾಮೀಣ ಪತ್ರಕರ್ತರಿಗೂ ಸಾರಿಗೆ ಬಸ್ ಪಾಸ್ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಅದರಂತೆ ಅಧಿಕೃತ ಆದೇಶ ಮಾಡಿದ್ದರಿಂದ ಈಗ ಶೀಘ್ರವೇ ಗ್ರಾಮೀಣ ಪತ್ರಕರ್ತರಿಗೆ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲಿದ್ದಾರೆ.

ಗ್ರಾಮೀಣ ಭಾಗದ ಪತ್ರಕರ್ತರಿಗೆ ಅನುಕೂಲವಾಗಲೆಂದು ಬಸ್ ಪಾಸ್ ಜಾರಿ ಸಂಬಂಧ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನೆಲೆಯಲ್ಲಿ, ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದರು.

ಮಾಹಿತಿ ಹಂಚಿಕೊಂಡಿರುವ ಅವರು, ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ಹಾಗಾಗಿ ಶೀಘ್ರದಲ್ಲಿ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದರು.

ಈ ಬೆನ್ನಲ್ಲೇ ಮಾನ್ಯತೆ ಪಡೆಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಬಾಸ್ ವಿತರಣೆಗೆ ಸರ್ಕಾರ ಸಿದ್ಧವಾಗಿದೆ. ಅದಕ್ಕೂ ಮುನ್ನಾ ಗ್ರಾಮೀಣ ಪತ್ರಕರ್ತರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿತರಣೆ ಮಾಡುವಂತ ಪಾಸ್ ಮಾದರಿಯನ್ನು ರಿವೀಲ್ ಮಾಡಲಾಗಿದೆ. ಆಯಾ ಜಿಲ್ಲೆಯಾಧ್ಯಂತ ಪತ್ರಕರ್ತರು ಎಲ್ಲಾ ಮಾದರಿಯ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಸ್ ಪಾಸ್ ಮಾನ್ಯತೆ ಪಡೆಯದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಶೀಘ್ರವೇ ವಿತರಣೆ ಮಾಡಲಾಗುತ್ತದೆ.