ಬೆಂಗಳೂರು:- ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ವ್ಯವಸ್ಥೆ ಅಳವಡಿಕೆಗೆ ಅವಕಾಶ ಕಲ್ಪಿಸುವುದು, ಒಬಿಸಿ ನಿರುದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನ ಖರೀದಿಗೆ ಸಹಾಯಧನ ದೇವದಾಸಿಯರ ಮಕ್ಕಳ ಕಲ್ಯಾಣಕ್ಕೆ ವಿವಿಧ ಸೌಲಭ್ಯ ಸೇರಿದಂತೆ 17 ವಿಧೇಯಕಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಅನುಕಂಪದ ನೇಮಕಾತಿ: ನಕ್ಸಲ್ ನಿಗ್ರಹ ದಳ, ಕಾರ್ಕಳ ಇಲ್ಲಿ “ದ್ವಿತಿಯ ದರ್ಜೆ ಸಹಾಯಕ” ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವಂಗತ ಪಿ.ಜಗದೀಶ್ ಇವರ ಅವಿವಾಹಿತ ಸಹೋದರಿ ಕುಮಾರಿ ತಾರಾ ಇವರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ನಿಯಮ 5ನೇ ಸಡಿಲಿಸಿ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಇದು ಯಾವುದೇ ಪ್ರಕರಣಕ್ಕೂ ಪೂರ್ವ ನಿರ್ದೇಶನವಾಗದ ಷರತ್ತಿಗೊಳಪಡಿಸಿ ಅನುಕಂಪದ ಆಧಾರದ ನೇಮಕಾತಿ ನೀಡಲು ಸಚಿವ ಸಂಪುಟವು ಅನುಮೋದಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ.
ಸರ್ಕಾರಿ ನೌಕರರು ಮೃತರಾದ ಒಂದು ವರ್ಷದ ಅವಧಿಯೊಳಗೆ ಅರ್ಜಿಯನ್ನು ಸಲ್ಲಿಸಿರುವುದಿಲ್ಲ. ಆದರೆ, ಮೀನಾಕ್ಷಿ ಪಿ ರವರು ಅರ್ಜಿಯನ್ನು ನಿಗದಿತ ಅವಧಿಯಲ್ಲಿ ಸಲ್ಲಿಸಿರುತ್ತಾರೆ. ಈ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಯಾವುದೇ ಪ್ರಕರಣಕ್ಕೂ ಪೂರ್ವ ನಿದರ್ಶನವಾಗದ ಷರತ್ತಿಗೊಳಪಡಿಸಿ, ಅನುಕಂಪ ಆಧಾರದ ಮೇಲೆ ನೇಮಕಾತಿ ನೀಡಲು ಪ್ರಸ್ತಾಪಿಸಲಾಗಿತ್ತು.
ಪ್ರತಿ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ವ್ಯತ್ಯಾಸದ ಮೊತ್ತ ರೂ.265.57 ಲಕ್ಷಗಳಂತೆ ಒಟ್ಟು 15 ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತ ರೂ.3983.55 ಲಕ್ಷಗಳ ಯೋಜನಾ ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ರೂ.87.60 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ರಾಜ್ಯದ 15 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ 15 ಮಹಿಳಾ ಕಾಲೇಜು ಕಟ್ಟಡಗಳ ನಿರ್ಮಾಣದ ರೂ.87.60 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿತ್ತು. ಪ್ರತಿ ಕಾಲೇಜಿನ ನಿರ್ಮಾಣಕ್ಕೆ ವ್ಯತ್ಯಾಸದ ಮೊತ್ತ ರೂ.265.57 ಲಕ್ಷಗಳಂತೆ ಒಟ್ಟು 15 ಕಾಲೇಜುಗಳ ಕಟ್ಟಡ ನಿರ್ಮಾಣಕ್ಕೆ ತಗಲುವ ವ್ಯತ್ಯಾಸದ ಮೊತ್ತ ರೂ.39.83 ಕೋಟಿಗಳ ಯೋಜನಾ ವೆಚ್ಚಕ್ಕೆ ಅನುಮೋದನೆಗೆ ಮಂಡಿಸಲಾಗಿತ್ತು.
Leave feedback about this