ದೆಹಲಿ:- ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ ನಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು.
ಇದೀಗ ಇಂದು ಸುಪ್ರೀಂ ಕೋರ್ಟ್ ನಲ್ಲಿ ನ್ಯಾ.ಪರ್ದಿವಾಲ, ನ್ಯಾ. ಮಹದೇವನ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಎರಡು ಕಡೆಯ ವಾದ ಆಲಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಮೂರೂ ಪುಟದೊಳಗೆ ಲಿಖಿತವಾದ ವಾದ ಅಂಶ ಸಲ್ಲಿಸಿ ಮೂರು ವಾರದಲ್ಲಿ ಲಿಖಿತವಾದ ವಾದ ಅಂಶ ಸಲ್ಲಿಸಲು ಇದೆ ವೇಳೆ ಸೂಚನೆ ನೀಡಲಾಯಿತು.
Leave feedback about this