ಬೆಂಗಳೂರು:- ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿದ್ದಾರೆ.
ನಿನ್ನೆ ತಾನೆ ಉಪಮುಖ್ಯಮಂತ್ರಿ, ಡಿ.ಕೆ ಶಿವಕುಮಾರ್ ಅವರು ಕಲ್ಬುರ್ಗಿಯಲ್ಲಿ ಶರಣಬಸವಪ್ಪ ಅಪ್ಪಾಜಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳಿದ್ದರು.
ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಇದೀಗ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈಗ ಅವರು ಇಂದು ಇಹಲೋಕಾ ತ್ಯಜಿಸಿದ್ದಾರೆ.
ವಕ್ಫ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, “ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು” ಎಂದು ಹೇಳಿದ್ದರು. ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇರುವ ವೇದಿಕೆಯಲ್ಲಿ, “ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗ್ತಾರೆ. ಸಿಎಂ ಕುರ್ಚಿ ಬಿಟ್ಟುಕೊಡಬೇಕು” ಎಂಬ ಹೇಳಿಕೆ ನೀಡಿ ಮುಜುಗರ ಉಂಟು ಮಾಡಿದ್ದರು.
Leave feedback about this