ದಾವಣಗೆರೆ

ಶಾಮನೂರು ಶಿವಶಂಕರಪ್ಪ ಅವರು ಶತಾಯುಷಿ ಆಗಲಿದ್ದಾರೆ.- ಸಿಎಂ

ದಾವಣಗೆರೆ:- ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ‌ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ.
ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ, ಶಾಮನೂರು ಶಿವಶಂಕರಪ್ಪರವರ 95ನೇ ಜನ್ಮದಿನದಂದು ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿ, ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ದವಿದೆ ಎಂದಿದ್ದಾರೆ.