ಬೆಂಗಳೂರು

ಶಾಸಕರಿಗೆ ಶುಭ ಸುದ್ಧಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:- ಗ್ಯಾರಂಟಿ ಯೋಜನೆಗಳಿಗೆ ಖರ್ಚಾಗುತ್ತಿರುವುದು ಕಡಿಮೆ ಹಣವೇನು ಅಲ್ಲ, ಕೋಟಿ ಕೋಟಿ ಖರ್ಚಾಗುತ್ತಿದೆ. ಈ ನಡುವೆ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸುವ ಕಾರಣ ನೀಡಿ ಕ್ಷೇತ್ರಗಳಿಗೆ ಅನುದಾನ ನೀಡುತ್ತಿಲ್ಲ ಎಂದು ರಾಜ್ಯದ ಶಾಸಕರು ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದರು. ಸಿದ್ದರಾಮಯ್ಯ ಅವರು ಶಾಸಕರಿಗೆ ಶುಭ ಸುದ್ಧಿಯೊಂದು ನೀಡಿದ್ದಾರೆ.

ಶಾಸಕರ ಕ್ಷೇತ್ರಗಳಿಗೆ 50 ಕೋಟಿ ಅನುದಾನವನ್ನು ರಿಲೀಸ್ ಮಾಡಲಾಗಿದೆ. ಶಾಸಕರ ಅಸಮಾಧಾನ ತಣಿಸಲು ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿ 50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಮೂಲಕ ತಮ್ಮ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅವರು ಅನುದಾನ ನೀಡುವ ಕೊಡುಗೆ ನೀಡಿದ್ದಾರೆ.

ಲೋಕೋಪಯೋಗಿ ಇಲಾಖೆ ರಸ್ತೆ, ಸೇತುವೆ, ಕಾಮಗಾರಿ, ಗ್ರಾಮೀಣ ರಸ್ತೆ ಹಾಗೂ ನಗರ ಕಾಮಗಾರಿಗಳಿಗೆ 37.5 ಕೋಟಿ ಮೀಸಲಿಡಲಾಗುತ್ತಿದೆ. ಜೊತೆಗೆ 12.5 ಕೋಟಿ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ. ಇನ್ನೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜುಲೈ 30-31ರಂದು ಎರಡು ದಿನ ಶಾಸಕರೊಂದಿಗೆ ಮ್ಯಾರಥಾನ್ ಮೀಟಿಂಗ್ ಮಾಡಲಿದ್ದಾರೆ. ಶಾಸಕರು ಕ್ಷೇತ್ರದ ಬೇಡಿಕೆಗಳ ಪಟ್ಟಿ ಸಮೇತ ವಿವರಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ ಗ್ಯಾರಂಟಿಗೋಸ್ಕರ ಅನುದಾನವಿಲ್ಲ ಎಂದು ಹೇಳುತ್ತಿದ್ದವರಿಗೆ ಸಿದ್ದರಾಮಯ್ಯ ಅವರು ಈ ಮೂಲಕ ತಿರುಗೇಟು ಕೊಟ್ಟಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video