ದಾವಣಗೆರೆ

ಶಾಸಕ ಬಸವರಾಜು ಶಿವಗಂಗಾರಿಗೆ ನೋಟಿಸ್ ನೀಡಲಾಗುವುದು ಎಂದ ಡಿಕೆಶಿ

ದಾವಣಗೆರೆ:- ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗವಾಗಿ ಏನೂ ಮಾತನಾಡಬಾರದು ಎಂದು ಹೈಕಮಾಂಡ್‌ ಖಡಕ್‌ ಆಗಿ ಹಲವು ಬಾರಿ ಹೇಳಿದೆ. ಆದರೂ ಕೆಲವರು ರಾಜ್ಯದಲ್ಲಿ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮನಬಂದಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುತ್ತಿದ್ದರು. ಕೆ.ಎನ್‌ ರಾಜಣ್ಣ ಕೂಡ ಹಲವು ಬಾರಿ ಈ ವಿಚಾರವಾಗಿ ಪ್ರಸ್ತಾಪಿಸಿದ್ದರು. ಈ ಈ ಎಲ್ಲವನ್ನೂ ಪರಿಗಣಿಸಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಇದೀಗ ಈ ಸರದಿಯಲ್ಲಿ ಕಾಂಗ್ರೆಸ್‌ನ ಶಾಸಕ ಬಸವರಾಜು ವಿ.ಶಿವಗಂಗಾ ಹೆಸರು ಮುನ್ನೆಲೆಗೆ ಬಂದಿದೆ.

ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಸವರಾಜು ವಿ.ಶಿವಗಂಗಾ ಮೇಲೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಗರಂ ಆಗಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಶಿವಗಂಗಾ ಅವರು ಸಿಎಂ ಅಧಿಕಾರ ಕುರಿತು ಹೇಳಿಕೆ ನೀಡಿದ್ದರು. ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಶಿವಕುಮಾರ್ ತಿಳಿಸಿದ್ದಾರೆ.

Leave feedback about this

  • Quality
  • Price
  • Service

PROS

+
Add Field

CONS

+
Add Field
Choose Image
Choose Video